ಬೆಳಗಾವಿ : ರಾಜ್ಯದಲ್ಲಿ ಎಪಿಎಂಸಿ (APMC) ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (Minister ST Somshekar) ಈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಬಹುದು.
ಇದರಿಂದ ರೈತರಿಗೆ ಯಾವುದೇ ನಷ್ಟವಾಗುವುದಿಲ್ಲ. ಹೀಗಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಲ್ಲ, ಲಾಭದಲ್ಲಿ ಇರುವ ಎಪಿಎಂಸಿಗಳನ್ನು ಯಾವ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ತಿಳಿಸಿದ್ದಾರೆ.
ತಾನು ಬೆಳೆದ ಬೆಳೆಯನ್ನು ರೈತ ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಹೀಗಾವಿ ಯಾವ ರೈತರಿಗೂ ಇದರಿಂದ ಯಾವುದೇ ರೀತಿಯ ನಷ್ಟ ಉಂಟಾಗುವುದಿಲ್ಲ. ಲಾಭದಲ್ಲಿ ಇರುವ ಎಪಿಎಂಸಿಗಳನ್ನು ಯಾವ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ.