ಮಂಗಳೂರು : ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ . ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಕುಟುಂಬದ ಮನೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ. ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ. ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ ಕ್ರಮವಾಗಲೇಬೇಕು. ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ . ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ