Breaking News

ನಾವು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೇ ಹಾಕ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

Spread the love

ಬೆಳಗಾವಿ ಅಧಿವೇಶನದ ವೇಳೆ ರಾಜ್ಯ ಸರಕಾರ ಜಾರಿಗೆ ತಂದ ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮುಂದಾದರು.

ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕೂಡಿಹಳ್ಳಿ ಚಂದ್ರಶೇಖರ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೂಲ್ ಗೆ ಆಗಮಿಸಿದರು. ರೈತರ ಮತ್ತು ಪೆÇೀಲಿಸರ ಜೊತೆ ಮಾತುಕತೆ ನಡೆಸಿದ ರಾಜ್ಯಾಧ್ಯಕ್ಷ 10 ಗಂಟೆಗೆ ಹಿರೇಬಾಗೇವಾಡಿ ಯಲ್ಲಿರುವ ಬಸವೇಶ್ವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಾದ ಯಾತ್ರೆ ಆರಂಭ ಮಾಡಿದರು.

ನಮ್ಮರೈತರು ಇನ್ನು ಸೇರ್ತಾಇದಾರೆ, ನಾವೂ ಪಾದಯಾತ್ರೆ ಮಾಡೆ ಮಾಡ್ತೀವಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಸ್ಥಳಕ್ಕೆ ಬಂದ ಪೊಲೀಸರು ಪಾದಯಾತ್ರೆ ಬೇಡ ಎಂದು ಮನವಿ ಮಾಡಿಕೊಂಡರು. ಇಲ್ಲ ನಾವೂ ಪಾದಯಾತ್ರೆ ಯ ಮುಖಾಂತರ ಸುವರ್ಣಸೌಧಕ್ಕೆ ಮುತ್ತಿಗೆ ಹಾಕೆ ಹಾಕ್ತೆವಿ ಎಂದು ಕೂಡಕಳ್ಳಿ ಚಂದ್ರಶೇಖರ ಹೇಳಿದರು.

Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ