Breaking News

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹಲವು ನಿಣರ್ಯ ತೆಗೆದುಕೊಳ್ಳುತ್ತೇವೆ : ಸಿಎಂ

Spread the love

ಬೆಳಗಾವಿ:ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರಸಕ್ತ ವಿಧಾನಮಂಡಲದ ಅಧಿವೇಶನದಲ್ಲಿ ಕೆಲವು ನಿಣರ್ಯಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅಧಿವೇಶನದಲ್ಲಿ ಸರ್ಕಾರ ಕೆಲವು ವಿಧೇಯಕಗಳನ್ನು ಮಂಡಿಸಲಿದೆ.

ಹಾಗೆಯೇ ಉತ್ತರ ಕರ್ನಾಟಕದ ಅಭಿವೃದ್ದಿ ಕುರಿತ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡಲು ಸಿದ್ದವಿದೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಿದ್ದವಿದ್ದು, ಹಲವು ಯೋಜನೆಗಳನ್ನು ಜಾರಿಗೆ ತರಲು ಕ್ರಮ ಕೈಗೊಳ್ಳುತ್ತೇನೆ. ಸದನದ ಮೂಲಕ ಈ ಭಾಗದ ಜನರು ನಿರೀಕ್ಷೆ ಮಾಡಬಹುದು ಎಂದರು.

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಸದನದಲ್ಲಿ ಮಂಡಿಸಲಾಗುವುದು. ಲವ್ ಜಿಹಾದ್ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕಾಯ್ದೆಗಳ ಪರಿಶೀಲನಾ ಸಮಿತಿ ಮುಂದೆ ಯಾವ ಯಾವ ಕಾಯ್ದೆಗಳು ಬರುತ್ತವೋ ನೋಡೋಣ. ಆನಂತರ ಸದನದಲ್ಲಿ ಅವುಗಳನ್ನು ಮಂಡಿಸುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎನ್ನುವ ಮೂಲಕ ಲವ್ ಜಿಹಾದ್ ವಿರುದ್ಧದ ಮಸೂದೆ ಮಂಡನೆ ಬಗ್ಗೆ ಸುಳಿವು ನೀಡಿದರು.

ಪ್ರತಿಭಟಿಸುತ್ತಿರುವ ರೈತರ ಜೊತೆ ಚರ್ಚೆ ಮಾಡಲಾಗುವುದು. ರೈತರ ವಿರೋಧ ವ್ಯಕ್ತವಾಗಿರುವ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಕೇಳಲಾದ ಪ್ರಶ್ನೆಗೆ, ರೈತರು ಯಾವ ವಿಚಾರವನ್ನು ಪ್ರಸ್ತಾಪಿಸುತ್ತಾರೋ ಕಾದುನೋಡಿ ಆನಂತರ ತೀರ್ಮಾನ ಮಾಡುವುದಾಗಿ ಹೇಳಿದರು.


Spread the love

About Laxminews 24x7

Check Also

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

Spread the loveಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ