ಸಿಟಿ ಸರ್ವೇ ಆಫೀಸಲ್ಲಿ ಕಳೆದ 10 ವರ್ಷಗಳಲ್ಲಿ ನಡೆದ ಪ್ರಕರಣಗಳನ್ನು ಕುರಿತಂತೆ ತನಿಖೆ ಮಾಡಲು ತನಿಖಾಧಿಕಾರಿಗಳನ್ನು ನೇಮಿಸಿ ತನಿಖೆ ನಡೆಸಿ ಸೂಕ್ರ ಕ್ರಮ ಜರುಗಿಸುವ ನಿಟ್ಟಿನಲ್ಲಿ ಸರಿಯಾದ ಉತ್ತರವನ್ನು ಕಂದಾಯ ಸಚಿವರು ಒದಗಿಸಿಲ್ಲ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಗಮನ ಸೆಳೆಯುವ ಪ್ರಶ್ನೆ ಕೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳನ್ನು ಕುರಿತಂತೆ ಚಚೆ ಮಾಡಲಾಗುತ್ತಿದೆ. ಈ ವೇಳೆ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಳೆದ 10ವರ್ಷಗಳಲ್ಲಿ ಸಿಟಿ ಸರ್ವೆ ಆಫೀಸ್‍ನಲ್ಲಿ ನಡೆದ ಪ್ರಕರಣಗಳನ್ನು ಕುರಿತಂತೆ ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಕಂದಾಯ ಸಚಿವರ ಗಮನ ಸೆಳೆದರು. ಅನೇಕ ವರ್ಷಗಳಿಂದ ಸಿಟಿ ಸರ್ವೆ ಆಫೀಸ್‍ನಲ್ಲಿ ಅಕ್ರಮಗಳು ನಡೆದಿದ್ದು ಅದರ ಸೂಕ್ತ ತನಿಖೆಗೆ ತನಿಖಾಧಿಕಾರಿಗಳನ್ನು ನೇಮಕ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಆದರೆ ಈ ಕುರಿತು ಸೂಕ್ತ ಉತ್ತರವನ್ನು ನೀಡಿಲ್ಲ. ಅರ್ಬನ್ ಡೆವಲಪ್‍ಮೆಂಟ್ ಅಥಾರಿಟಿ ಏಕ ನಿವೇಶನ ಹಂಚಿಕೆ ವಿಚಾರದಲ್ಲಿ ಸರಕಾರದ ಬೊಕ್ಕಸಕ್ಕೆ ತುಂಬಿಸಬೇಕಾಗಿದ್ದ ಹಣಕಾಸಿನ ವಿಚಾರದಲ್ಲಿ ಅಕ್ರಮ ನಡೆದಿದೆ. ಕಳೆದ 4ತಿಂಗಳ ಹಿಂದೆ ಈ ಪ್ರಶ್ನೆಗೆ ಉತ್ತರ ನೀಡಿದ್ದ ಸಚಿವರು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದರು. ಆದರೆ ಇನ್ನು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇದರಲ್ಲಿ ಕೇವಲ ಅಧಿಕಾರಿಗಳು ಮಾತ್ರವಲ್ಲದೇ ಲ್ಯಾಂಡ್ ಮಾಫಿಯಾದವರೂ ಇದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.