Breaking News

ಬೆಳಗಾವಿ ಅಧಿವೇಶನಕ್ಕೆ ಬರುವವರಿಗೆ ಡಬಲ್ ಡೋಸ್ ಲಸಿಕೆ, 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ ಕಡ್ಡಾಯ: ಡಿಸಿ ಆರ್.ವೆಂಕಟೇಶ್‍ಕುಮಾರ್

Spread the love

ಬೆಳಗಾವಿ ಸುವರ್ಣಸೌಧದಲ್ಲಿ  ಅಧಿವೇಶನಕ್ಕೆ ಆಗಮಿಸುವ ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಅದೇ ರೀತಿ 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟನ್ನು ತೋರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್‍ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶ್‍ಕುಮಾರ್ ಅವರು ಕೋವಿಡ್ ಹಿನ್ನೆಲೆಯಲ್ಲಿ ಇದೀಗ ಎರಡು ಹೊಸ ನಿರ್ದೇಶನಗಳು ಬಂದಿವೆ. ಎರಡು ಡೋಸ್ ಲಸಿಕೆ ಮತ್ತು 72 ಗಂಟೆಯೊಳಗಿನ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟನ್ನು ಕಡ್ಡಾಯವಾಗಿ ತೋರಿಸಬೇಕು. ನಾವು ಕೂಡ ಅಲ್ಲಿ ಎರಡು ಸ್ವ್ಯಾಬ್ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಿದ್ದೇವೆ. ಈಗಾಗಲೇ ಡಿಪಿಆರ್‍ಗೆ ಪತ್ರ ಬರೆದಿದ್ದೇವೆ, ಎಲ್ಲಾ ಕಾರ್ಯದರ್ಶಿ ಮಟ್ಟದ ಸಿಬ್ಬಂದಿಗಳು, ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು ಎರಡನ್ನೂ ತೆಗೆದುಕೊಂಡ ಬರಬೇಕು. ಇನ್ನು ಊಟ, ವಸತಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅದೇ ರೀತಿ ಎಲ್ಲಾ ಕೊಠಡಿಗಳಲ್ಲಿ ಇ-ಆಫೀಸ್ ವ್ಯವಸ್ಥೆ ಮಾಡಿದ್ದೇವೆ. ಎಲ್ಲಾ ಫೈಲ್‍ಗಳು ಇ-ಆಫೀಸ್‍ನಿಂದ ಮುಂದಕ್ಕೆ ಹೋಗುತ್ತವೆ ಎಂದರು.ಇನ್ನು ತಾತ್ಕಾಲಿಕವಾಗಿ ತಾರಿಹಾಳದ ಹತ್ತಿರ ಟೌನ್‍ಶೀಪ್ ಮಾಡುತ್ತಿದ್ದೇವೆ. ಹೊರಗಡೆಯಿಂದ ಎರಡೂವರೆ ಸಾವಿರಕ್ಕೂ ಹೆಚ್ಚು ಮಂದಿ ಬರುತ್ತಿದ್ದಾರೆ. ಪೊಲೀಸ್ ಕಮಿಷನರ್ ಅವರು ಊಟ, ವಸತಿ ಸೇರಿದಂತೆ ಇನ್ನಿತರ ಜವಾಬ್ದಾರಿಯನ್ನು ನೀಡಲಾಗಿದೆ. ಇನ್ನು ಅಧಿವೇಶನ ವೇಳೆ ಪ್ರತಿಭಟನೆ ಮಾಡುವವರು ಸರ್ಕಾರದ ಮಾರ್ಗಸೂಚಿ ಪ್ರಕಾರ 500ಕ್ಕೂ ಹೆಚ್ಚು ಜನರು ಇರಬಾರದು. ಯಾವುದೇ ಕಾರಣಕ್ಕೂ ಹೆಚ್ಚಿಗೆ ಜನ ಸೇರಬಾರದು. ಕೋವಿಡ್ ನಿಯಮಗಳನ್ನು ಯಾರೂ ಉಲ್ಲಂಘಿಸದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಕಮಿಷನರ್‍ಗೆ ಸೂಚನೆ ಕೊಟ್ಟಿದ್ದೇನೆ ಎಂದರು. ಅದೇ ರೀತಿ ಕೊಂಡಸಕೊಪ್ಪ ಹಾಗೂ ಸುವರ್ಣಗಾರ್ಡನಲ್ಲಿ ಪ್ರತಿಭಟನೆಗೆ ಹೋರಾಟಗಾರರಿಗೆ ಅವಕಾಶ ಮಾಡಿಕೊಡಲಾಗಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ