91 ಅಭ್ಯರ್ಥಿಗಳ ಭವಿಷ್ಯ
- ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 20 ಕ್ಷೇತ್ರಗಳಲ್ಲಿ ಸ್ಪರ್ಧೆ
- ಜೆಡಿಎಸ್ ಕೇವಲ ಆರು ಪರಿಷತ್ ಕ್ಷೇತ್ರಗಳಲ್ಲಿ ಸ್ಪರ್ಧೆ
- ಕೆಲವು ಕಡೆಗಳಲ್ಲಿ ಮೂರೂ ಪಕ್ಷಗಳಿಂದ ತೀವ್ರ ಪೈಪೋಟಿ
- 91 ಅಭ್ಯರ್ಥಿಗಳ ಭವಿಷ್ಯ ಬರೆಯಲಿರುವ 96 ಸಾವಿರ ಮತದಾರರು
ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಕ್ಷಣಗಣನೆ
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್‍ನ 25 ಸ್ಥಾನಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದೆ.
ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೀದರ್, ಕಲಬುರಗಿ, ಬಿಜಾಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೊಡಗು, ಮೈಸೂರು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿದೆ.
Laxmi News 24×7