Breaking News

ಬಿಜೆಪಿಗೆ ಧಮ್ ಇಲ್ಲ; ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ : ಸಿದ್ದರಾಮಯ್ಯ

Spread the love

ಬೆಂಗಳೂರು: ಪರಿಷತ್ ಫಲಿತಾಂಶದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಚಿಕ್ಕಮಗಳೂರಿನಲ್ಲಿ ನಮ್ಮ ಅಭ್ಯರ್ಥಿ 6 ಮತಗಳ ಅಂತರದಿಂದ ಸೋತರು. ಅಲ್ಲಿ ಹತ್ತು ಮಂದಿ ನಾಮಿನೇಟೆಡ್ ಮೆಂಬರ್ ಇದ್ದರು. ವೋಟ್ ಹಾಕಿಲ್ಲ. ಉಳಿದೆಡೆ ನಾವು ಉತ್ತಮ ಹೋರಾಟ ಮಾಡಿದ್ದೇವೆ. ಜನಪ್ರತಿನಿಧಿಗಳ ತೀರ್ಪು ನಮ್ಮ ಪರ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಸಾಬೀತಾಗಿದೆ ಎಂದರು.

ಬೆಳಗಾವಿ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಸೋಲನುಭವಿಸಿದೆ. ಇದು ಬಿಜೆಪಿಗೆ ಧಮ್ಮಿಲ್ಲ ಎಂಬುದನ್ನು ಸೂಚಿಸುತ್ತೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆದ್ದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ