ಬೆಳಗಾವಿ: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಲ ಮಾದರಿ ಅನುಸರಿಸುವ ಬಗ್ಗೆ ಅಧ್ಯಯನ ನಡೆಸಲು ನಾಲ್ವರು ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಲಿದ್ದು, ತಿಂಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಅವರು ವಿಧಾನ ಪರಿಷತ್ ಸಭಾಂಗಣದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸಂಬಂಧಿಸಿ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರ ಉಪಸ್ಥಿತಿಯಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಧಾರ ತಿಳಿಸಿದರು