Breaking News

ಲೈಂಗಿಕ ಕಾರ್ಯಕರ್ತೆಯರಿಗೂ `ಆಧಾರ್, ಪಡಿತರ, ವೋಟರ್ ಐಡಿ ನೀಡಿ : ಸುಪ್ರೀಂಕೋರ್ಟ್ ಆದೇಶ

Spread the love

ನವದೆಹಲಿ : ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ವೋಟರ್ ಐಡಿ (Aadhaar card, ration card and voter ID) ನೀಡುವಂತೆ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ (Supreme Court)ಆದೇಶ ಹೊರಡಿಸಿದೆ.

 

ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟದ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್‌, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು, ಮೂಲಭೂತ ಹಕ್ಕುಗಳನ್ನು ಪಡೆಯಲು ದೇಶದ ಪ್ರತಿಯೊಬ್ಬ ನಾಗರಿಕರು ಅರ್ಹರು. ಹೀಗಾಗಿ ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ವೋಟರ್ ಐಡಿ ನೀಡುವಂತೆ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ಲೈಂಗಿಕ ಕಾರ್ಯಕರ್ತೆಯರಿಗೆ ಮೂಲಭೂತ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ನೀಡುವ ಕುರಿತಂತೆ 2011ರಲ್ಲೇ ಹಲವು ನಿರ್ದೇಶನಗಳನ್ನು ನೀಡಿತ್ತು. ಇದೀಗ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಲೈಂಗಿಕ ಕಾರ್ಯಕರ್ತೆಯರಿಗೆ ಆಧಾರ್ ಕಾರ್ಡ್. ಪಡಿತರ ಚೀಟಿ, ವೋಟರ್ ಐಡಿ ನೀಡುವಂತೆ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ