Breaking News

ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,

Spread the love

ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಎನೂ ಹೇಳಲ್ಲ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದರು.

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ. ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ವರಿಷ್ಠರನ್ನ​ ಭೇಟಿಯಾದ ಸುಮಲತಾ

Spread the loveನವದೆಹಲಿ/ಮಂಡ್ಯ, (ಫೆಬ್ರವರಿ 08): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದು, ಕರ್ನಾಟಕದಲ್ಲಿ ರಾಜಕೀಯ (Karnataka Politics) ಚಟುವಟಿಕೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ