Breaking News

ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,

Spread the love

ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ ಬಾಂಬ್ ಸಿಡಿಸಬಹುದು ಆದರೆ ಎನೂ ಹೇಳಲ್ಲ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದರು.

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯಗೆ ಭಯ ಶುರುವಾಗಿದೆ, ವೇಸ್ಟ್ ಬಾಡಿ. ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ರಿಜೆಕ್ಟ್ ಮಾಡಿದ್ದಾರೆ. ಹೀಗಾಗಿ ತನಗೆ ಚ್ಯುತಿ ಬರುತ್ತೆ ಎಂದು ಅವರು ಹೆದರಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Spread the loveನವದೆಹಲಿ: ಜಲಮಂಡಳಿಯ ಯಮಗುಂಡಿಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದಾನೆ. ಆಳವಾದ ಗುಂಡಿಗೆ ಬಿದ್ದು ಬೈಕ್ ಸವಾರ ಕಮಲ್ ಪ್ರಾಣಪಕ್ಷಿ ಹಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ