Breaking News

ಸಾರಿಗೆ ಸಂಸ್ಥೆ ಸುಧಾರಿಸಿ ಆದಾಯ ಹೆಚ್ಚಳಕ್ಕೆ ತೀರ್ಮಾನ: ಬಿ. ಶ್ರೀರಾಮುಲು

Spread the love

ಬೆಳಗಾವಿ: ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಸುಧಾರಿಸಿ ಆದಾಯ ಹೆಚ್ಚಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ಹೇಳಿದರು.

 

ಪ್ರಶ್ನೋತ್ತರ ಅವಧಿಯಲ್ಲಿ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ೪ ವರ್ಷಗಳಿಂದ ಸಾರಿಗೆ ಪ್ರಯಾಣ ದರ ಏರಿಕೆ ಮಾಡಿಲ್ಲ.

ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಇದನ್ನು ಸುಧಾರಿಸಲು ನಿವೃತ್ತ ಐ.ಎ.ಎಸ್. ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿಯನ್ನು ಮುಖ್ಯಮಂತ್ರಿಗಳು ರಚಿಸಿದ್ದಾರೆ ಎಂದರು.

 

ಈ ಸಮಿತಿ ನೀಡುವ ವರದಿ ಶಿಫಾರಸ್ಸುಗಳನ್ನು ಆಧರಿಸಿ ಸಾರಿಗೆ ಸಂಸ್ಥೆಯ ಆದಾಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಹೆದ್ದಾರಿಗಳಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಸುಂಕ ವಿನಾಯ್ತಿ ನೀಡುವ ಬಗ್ಗೆಯೂ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದರು. ಇದಕ್ಕೂ ಮೊದಲು ಪ್ರಶ್ನೆ ಕೇಳಿದ್ದ ಶರತ್ ಬಚ್ಚೇಗೌಡ ಅವರು, 2017-18ನೇ ಸಾಲಿನಲ್ಲಿ ೪ ಸಾರಿಗೆ ನಿಗಮಗಳು ೮೦೦ ಕೋಟಿ, 2019-20 ರಲ್ಲಿ ಸಾವಿರ ಕೋಟಿ, 2021-22 ರಲ್ಲಿ 1200ಕೋಟಿ ರೂ. ನಷ್ಟ ಅನುಭವಿಸಿವೆ ಎನ್ನುವುದನ್ನು ಸದನದ ಗಮನಕ್ಕೆ ತಂದಿದ್ದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ