Breaking News

1 ಟ್ರಕ್ ಗೋವುಗಳ ಹಾಗೂ ಎಮ್ಮೆಗಳ ಚರ್ಮ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ  ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಬುಧವಾರ  ಮಾರಿಹಾಳ ಪೊಲೀಸ್ ಠಾಣೆಗೆ ಭೇಟಿ

Spread the love

ಬೆಳಗಾವಿ –  ಇತ್ತೀಚಿಗೆ  ಸಾರ್ವಜನಿಕರು ಮಾರಿಹಾಳ ಪೊಲೀಸ್ ಠಾಣೆಗೆ ನೀಡಿದ ಖಚಿತ ಮಾಹಿತಿ ಆಧಾರದಿಂದ 1 ಟ್ರಕ್ ಗೋವುಗಳ ಹಾಗೂ ಎಮ್ಮೆಗಳ ಚರ್ಮ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ  ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಬುಧವಾರ  ಮಾರಿಹಾಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದರು.
ಡಿ10 ರಂದು ರಾತ್ರಿ ಸಾರ್ವಜನಿಕರು ಪೆಟ್ರೋಲ್ ಬಂಕ್ ನಲ್ಲಿ ಡಿಸೈಲ್ ಹಾಕಿಸುತ್ತಿದ್ದ ಟ್ರಕ್ ನಿಂದ ರಕ್ತದ ನೀರು ಹರಿಯುತ್ತಿರುವುದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಟ್ರಕ್ ವಶಪಡಿಸಿಕೊಂಡು ತನಿಖೆ ನಡೆಸಿದಾಗ ಟ್ರಕ್ ನಲ್ಲಿ 5 ಸಾವಿರ ದನಗಳ ಚರ್ಮ ಕಂಡುಬಂದಿದ್ದು ಅದರಲ್ಲಿ 60% ಆಕಳುಗಳ ಹಾಗೂ 40% ಎಮ್ಮೆಗಳ ಚರ್ಮ ಕಂಡುಬಂದಿದೆ.
ಇದೊಂದು ದೊಡ್ಡ ಜಾಲವಿದ್ದು ಗೋವುಗಳ ಹತ್ಯೆ ನಿಷೇಧವಿದ್ದರೂ ಇಷ್ಟೊಂದು ಪ್ರಮಾಣದ ಹತ್ಯೆ ನಡೆದಿರುವುದರ  ಬಗ್ಗೆ ತನಿಖೆ ನಡೆಸಿ ಹತ್ಯೆಯ ಹಿಂದಿರುವ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸುವಂತೆ ಪೊಲೀಸರಿಗೆ ಸಚಿವರು ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಬೆನಕೆ, ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜಯ್ ಪಾಟೀಲ್, ಬಜರಂಗದಳದ ಕಾರ್ಯಕರ್ತರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.

Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ