Breaking News

ಬಿಜೆಪಿಗೆ ಸೋಲಾದ ಕ್ಷೇತ್ರಗಳಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲನೆ : B.S.Y.

Spread the love

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾದ ಕ್ಷೇತ್ರಗಳಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಬೆಳಗಾವಿ ಹಾಗೂ ಮೈಸೂರಿನಲ್ಲಿ ಪರಿಷತ್ ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಬೆಳಗಾವಿಯಲ್ಲಿ ಸೋಲಿನ ಬಗ್ಗೆ ಸುದೀರ್ಘ ಚರ್ಚೆಯಾಗಲಿದೆ. ಹೆಚ್ಚು ಮಂದಿ ಶಾಸಕರು, ಸಂಸದರು ಇದ್ದರೂ ಗೆಲ್ಲಲು ಸಾಧ್ಯವಾಗಿಲ್ಲ. ಎಲ್ಲಿ ಏನಾಗಿದೆ ಎಂಬುದರ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಇನ್ನು ಉತ್ತರ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ ಎರಡು ದಿನ ವಿಶೇಷ ಚರ್ಚೆ ನಡೆಸಬೇಕು ಎಂದು ಸ್ಪೀಕರ್ ಗೆ ಮನವಿ ಮಾಡಿದ್ದೇನೆ. ಇದಕ್ಕೆ ಸಿಎಂ ಸಹಮತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ