Breaking News

22 ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪತ್ರ, ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ;: ಅಶ್ವತ್ಥನಾರಾಯಣ

Spread the love

ಬೆಳಗಾವಿ: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ `ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆ ನೆರವೇರಿಸಿ ಅವರು ಬುಧವಾರ ಮಾತನಾಡಿದರು.

`ನೂರಾರು ಎಕರೆ ವಿಶಾಲವಾದ ಕ್ಯಾಂಪಸ್ಸುಗಳು ಈಗ ಅಪ್ರಸ್ತುತವಾಗುತ್ತಿವೆ. ಆಧುನಿಕ ತಂತ್ರಜ್ಞಾನವು ಸಮರ್ಥವಾಗಿದ್ದು, ತುಂಬಾ ಕಡಿಮೆ ಜಾಗದಲ್ಲಿ ವಿ.ವಿ.ಗಳನ್ನು ಸ್ಥಾಪಿಸಲು ಈಗ ಸಾಧ್ಯವಿದೆ. ದೊಡ್ಡದೊಡ್ಡ ವಿ.ವಿ.ಗಳನ್ನು ಆರಂಭಿಸುವ ಬದಲು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಇರುವಂತೆ ನೋಡಿಕೊಳ್ಳುವುದಕ್ಕೆ ಸರಕಾರದ ಆದ್ಯತೆ ಕೊಟ್ಟಿದೆ’ ಎಂದು ಅವರು ನುಡಿದರು.

 

120 ಎಕರೆ ವಿಶಾಲವಾಗಿರುವ ಬೆಳಗಾವಿಯ ವಿಟಿಯು ಕೂಡ ಐಐಟಿ ಮಾದರಿಯಲ್ಲೇ ಬೆಳೆಯಬೇಕು. ಈ ನಿಟ್ಟಿನಲ್ಲಿ ಕುಲಪತಿ ಪ್ರೊ.ಕರಿಸಿದ್ಧಪ್ಪನವರು ಇನ್ನು ಒಂದು ತಿಂಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಸರಕಾರಕ್ಕೆ ಸಲ್ಲಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಹೇಳಿದರು.

ಹಾಗೆಯೇ ರಾಜ್ಯದಲ್ಲಿರುವ 17 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಎಂಜಿನಿಯರಿಂಗ್ ಓದುವವರು ಸಹಜವಾಗಿಯೇ ಈ ಕಾಲೇಜುಗಳತ್ತ ಆಕರ್ಷಿತವಾಗುವಂತೆ ಇವುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇವುಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡುವುದರ ಜತೆಗೆ ಆಡಳಿತ ಮಂಡಳಿಯನ್ನೂ ಸ್ಥಾಪಿಸಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.

 

*


Spread the love

About Laxminews 24x7

Check Also

975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು

Spread the loveಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ