Breaking News

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ: ಕರವೇ ಆಕ್ರೋಶ

Spread the love

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ ಅಧ್ಯಕ್ಷ ದೀಪಕ‌ ದಳವಿಗೆ ಕಪ್ಪು ಮಸಿ ಬಳದಿರುವುದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಪುಂಡತನ ಮೆರೆದಿದ್ದಾರೆ.

ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ಸಮಯದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿತನ ಮಾಡಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಧ್ವಜಕ್ಕೆ ಬೆಂಕಿ ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೆಲ ಕಿಡಿಗೇಡಿಗಳು ಈ ವಿಡಿಯೋಗೆ, ಈಗ ಧ್ವಜಕ್ಕೆ ಬೆಂಕಿ ಹಾಕಲಾಗಿದೆ. ನಿಮ್ಮ ಮನೆಗಳಿಗೆ ಬೆಂಕಿ ಹಚ್ಚುವುದು ಬಾಕಿ ಉಳಿದಿದೆ ಎಂಬ ಸಂದೇಶ ಹಾಕಿ ಪೋಸ್ಟ್ ಮಾಡಿರುವುದು ಕನ್ನಡಿಗರನ್ನು ಕೆಣಕಿಸಿದೆ. ಕನ್ನದ ಧ್ವಜ ಸುಟ್ಟಿರುವ ವಿರುದ್ಧ ಟ್ವಿಟರ್ ನಲ್ಲಿ ಅಭಿಯಾನ ನಡೆಸಲಾಗುತ್ತಿದೆ.

ಸದ್ಯ ಗಡಿ ಭಾಗದಲ್ಲಿ ಭಾಷಾ ವಿವಾದ ಮತ್ತೆ ತಾರಕಕ್ಕೇರಿದ್ದು, ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ