ಬೆಳಗಾವಿ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸಮಸ್ಯೆ ಕುರಿತಂತೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಸುವರ್ಣಸೌಧದ ತಮ್ಮ ಕಾರ್ಯಾಲಯದಲ್ಲಿ ಸಭೆ ನಡೆಸಿದರು.
ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಕಾರ್ಖಾನೆಯ ಕಾರ್ಮಿಕರ ಸಮಸ್ಯೆಯನ್ನು ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಅಹವಾಲನ್ನು ಸ್ವೀಕರಿಸಿ, ಕಾರ್ಮಿಕರಿಗೆ ನೀಡಬೇಕಾಗಿರುವ ಬಾಕಿ ವೇತನ, ಇತರೆ ಸೌಲಭ್ಯಗಳನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಸಚಿವರ ಶೀಘ್ರ ಸ್ಪಂದನೆಗೆ ಕಾರ್ಮಿಕ ಸಂಘಟನೆಯ ಪ್ರಮುಖರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಆಯುಕ್ತರಾದ ಶ್ರೀ ಅಕ್ರಂ ಪಾಷಾ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಆಯುಕ್ತರಾದ ಶ್ರೀ ಶಿವಾನಂದ ಹೆಚ್.ಕಲಗೇರಿ , ಬಾಗಲಕೋಟ ಪೋಲಿಸ್ ವರಿಷ್ಠಾಧಿಕಾರ ಶ್ರೀ ಲೊಕೇಶ್ ಜಗಲಾಸರ್, ಕಾರ್ಮಿಕ ಸಂಘಟನೆಯ ಪ್ರಮುಖರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7