Breaking News
Home / ನವದೆಹಲಿ / 11 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 198 ಮಂದಿ ಸಾವು, 461 ಮಂದಿಗೆ ಗಾಯ

11 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 198 ಮಂದಿ ಸಾವು, 461 ಮಂದಿಗೆ ಗಾಯ

Spread the love

ಹಾವೇರಿ: ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ನವೆಂಬರ್ ತಿಂಗಳವರೆಗೆ ರಸ್ತೆ ಅಪಘಾತದಲ್ಲಿ 198 ಜನ ಅಸುನೀಗಿದ್ದಾರೆ. 461 ಮಂದಿ ಗಂಭೀರವಾಗಿ ಗಾಯಗೊಂಡರೆ, 677 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

ರಸ್ತೆ ಅಪಘಾತಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ 7 ಅಪಘಾತ ವಲಯಗಳನ್ನು ಗುರುತಿಸಿದೆ. ಅದರಲ್ಲಿ 3 ಅಪಘಾತ ವಲಯಗಳು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿವೆ ಎಂದರು.

ಶಿಗ್ಗಾವಿ ತಾಲೂಕಿನ ತಡಸದ ಬಳಿಯ ತಿಮ್ಮಾಪುರ ಕ್ರಾಸ್, ಶಿಗ್ಗಾವಿ ಪಟ್ಟಣದ ಗಂಗಿಬಾವಿ ಕ್ರಾಸ್ ಮತ್ತು ಖುರ್ಸಾಪುರ್ ಕ್ರಾಸ್​ಗಳಲ್ಲಿ ಅತಿಹೆಚ್ಚು ಅಪಘಾತಗಳು ಸಂಭವಿಸಿವೆ. ಅದರಂತೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿಂದ ಛತ್ರದವರೆಗಿನ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ರಾಣೆಬೆನ್ನೂರು ನಗರದಿಂದ ಹಲಗೇರಿ ಸಂಪರ್ಕಿಸುವ ರಸ್ತೆಯ ಕೆಳಸೇತುವೆ, ಮತ್ತು ಕುಮಾರಪಟ್ಟಣಂನ ಹಳೆಯ ಕರೂರು ಕ್ರಾಸ್‌ ಹಾಗೂ ಮಾಕನೂರು ಕ್ರಾಸಗಳನ್ನ ಪೊಲೀಸ್ ಇಲಾಖೆ ಅಪಘಾತ ವಲಯಗಳೆಂದು ಗುರುತಿಸಿದೆ ಎಂದು ಮಾಹಿತಿ ನೀಡಿದರು.

ಬ್ಯಾಡಗಿ ತಾಲೂಕಿನ ಛತ್ರದಿಂದ ಮೋಟೆಬೆನ್ನೂರು ಸಂಪರ್ಕಿಸುವ ರಸ್ತೆ ಮತ್ತು ಶಿಗ್ಗಾವಿಯಿಂದ ಖುರ್ಸಾಪುರ ಸಂಪರ್ಕಿಸುವ ರಸ್ತೆಗಳು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿವೆ. ಇಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿರುವ ಕಾರಣ ಅಪಘಾತಗಳ ಸಂಖ್ಯೆ ಅಧಿಕವಾಗಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿನ ಛತ್ರ ಮತ್ತು ಮೋಟೆಬೆನ್ನೂರಲ್ಲಿ ಮೆಲ್ಸೇತುವೆ ಮತ್ತು ಸರ್ವಿಸ್ ರಸ್ತೆಗಳು ಸಮರ್ಪಕವಾಗಿಲ್ಲದ ಕಾರಣ ಅಧಿಕ ಅಪಘಾತಗಳು ಸಂಭವಿಸುತ್ತಿವೆ. ಈ ಕುರಿತಂತೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿರುವುದಾಗಿ ಎಸ್​ಪಿ ಹನುಮಂತರಾಯ ತಿಳಿಸಿದರು.

ಅಲ್ಲದೆ, ಇಲ್ಲಿ ಸಮರ್ಪಕ ಸರ್ವಿಸ್ ರಸ್ತೆ ಮತ್ತು ಅದಕ್ಕೆ ಸಂಬಂಧಿಸಿದ ಎಚ್ಚರಿಕೆ ಬೋರ್ಡ್‌ಗಳನ್ನು ಅಳವಡಿಸುವ ಮೂಲಕ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತವೆ ಎಂದು ಎಸ್​ಪಿ ಹನುಮಂತರಾಯ ತಿಳಿಸಿದರು.

ಜಿಲ್ಲೆಯ ವಿವಿಧ ರಸ್ತೆಗಳಲ್ಲಿ 14 ಇಆರ್ ಎಎಸ್​ಎಸ್​ ವಾಹನ 8 ಸಂಚಾರಿ ಪೊಲೀಸ್ ವಾಹನಗಳು ರಸ್ತೆ ಸಂಚಾರದ ಕಣ್ಗಾವಲಿಗೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕಣ್ಗಾವಲಿಗೆ ವಿಶೇಷವಾದ ಪಡೆ ಇದೆ ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಲೇನ್ ಡಿಸಿಪ್ಲೇನ್‌ಗಾಗಿ ಎಚ್ಚರಿಕೆಯ ಸಂದೇಶಗಳನ್ನು ಹಾಕಲಾಗುತ್ತಿದೆ. ಅಲ್ಲದೆ ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದರೆ ಚಳಗೇರಿ ಮತ್ತು ಬಂಕಾಪುರ ಟೋಲ್ ಗೇಟ್‌ಗಳಲ್ಲಿ ದಂಡ ಹಾಕುವ ವ್ಯವಸ್ಥೆ ಸಹ ಜಾರಿಗೆ ತರಲಾಗುತ್ತಿದೆ ಎಂದು ಎಸ್​ಪಿ ತಿಳಿಸಿದರು.

ರಸ್ತೆ ತಿರುವುಗಳಲ್ಲಿ ಸೂಚನಾ ಫಲಕಗಳು ರಸ್ತೆಯಲ್ಲಿರುವ ರೋಡ್ ಬ್ರೇಕ್‌ಗಳ ಹಾಕುವಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಪೊಲೀಸ್ ಇಲಾಖೆ ಜಿಲ್ಲೆಯಲ್ಲಿನ ಅಪಘಾತಗಳ ತಡೆಯುವಿಕೆ ಅವಿರತವಾಗಿ ಶ್ರಮಿಸುತ್ತಿದೆ ಎಂದು ಎಸ್​ಪಿ ಹನುಮಂತರಾಯ ತಿಳಿಸಿದರು.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ