Breaking News

ಕನ್ನಡ ಧ್ವಜ ಸುಟ್ಟವರ ವಿರುದ್ಧ ಶಿವರಾಜ್​ಕುಮಾರ್ ಕೆಂಡ.. ತಕ್ಕ ಶಿಕ್ಷೆಗೆ ಆಗ್ರಹ

Spread the love

ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಿರುವ ಘಟನೆ ಖಂಡಿಸಿ ನಟ ಶಿವರಾಜ್​​ ಕುಮಾರ್​ ಧ್ವನಿಯೆತ್ತಿದ್ದು ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿ ಆಕ್ರೋಶ ಹೊರಹಾಕಿದ ಶಿವರಾಜ್​ ಕುಮಾರ್​‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಆಗ್ರಹಿಸಿದ್ದಾರೆ.

ಪ್ರಕರಣದ ಹಿನ್ನೆಲೆ..
ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್​ ಕಾರ್ಯಕರ್ತರು ಮಹಾಮೇಳವನ್ನ ಆಯೋಜಿಸಿ ನಿನ್ನೆ ಉದ್ಧಟತನ ಮೆರೆದಿದ್ದರು. ಮಾತ್ರವಲ್ಲದೆ ಬೆಳಗಾವಿ ಪಾಲಿಕೆ ಸಿಬ್ಬಂದಿಗೆ ಎಂಇಎಸ್​ನ ಕೆಲವು ಪುಂಡರು ಆವಾಜ್ ಹಾಕಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದವು.
ಇದರಿಂದ ಕೆರಳಿದ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್​ ಮುಖಂಡರಿಗೆ ಮಸಿ ಬಳಿದಿದ್ದರು. ಇದನ್ನು ಖಡಿಸಿ ಮಹಾರಾಷ್ಟ್ರದಲ್ಲಿ ಶಿವಸೇನೆಯ ಕಾರ್ಯಕರ್ತರು ನಾಡ ಬಾವುಟಕ್ಕೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದರು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.


Spread the love

About Laxminews 24x7

Check Also

ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ

Spread the love ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ  -ಖಾನಾಪೂರದ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ