ಯು ಬಿ ವೆಂಕಟೇಶ್ ಅಸಮಾಧಾನ:
ಸಚಿವರ ಉತ್ತರದಿಂದ ಸಮಾಧಾನಗೊಳ್ಳದ ಕಾಂಗ್ರೆಸ್ ಸದಸ್ಯ ಯು ಬಿ ವೆಂಕಟೇಶ್, ಶ್ರೀಕಿ ಅವರ ತಂದೆ ತನ್ನ ಮಗನಿಗೆ ಡ್ರಗ್ಸ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕೀಯ ನಾಯಕರು ಭಾಗಿಯಾಗಿರುವ ಆರೋಪವೂ ಕೇಳಿ ಬಂದಿದೆ.
ಇದರಿಂದಾಗಿ ಪ್ರಕರಣದ ಸೂಕ್ತ ತನಿಖೆ ನಡೆಸಬೇಕು. ಅನಗತ್ಯವಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವವರಿಗೆ ಕಾಪಾಡುವ ಕಾರ್ಯ ಸರ್ಕಾರ ಮಾಡಬಾರದು. ಶ್ರೀಕಿಗೆ ಡ್ರಗ್ಸ್ ನೀಡಿರುವ ಆರೋಪದ ನಂತರ ನಡೆಸಿದ ತಪಾಸಣೆಯನ್ನು ಪೊಲೀಸರು ಸಮರ್ಪಕವಾಗಿ ಮಾಡಿಲ್ಲ. ಮೊದಲು ಹೊಟ್ಟೆಯನ್ನು ಸ್ವಚ್ಛಗೊಳಿಸಿದ ನಂತರ ಎಫ್ಎಸ್ಎಲ್ ವರದಿಗೆ ಕಳುಹಿಸಿಕೊಡಲಾಗಿದೆ. ಇದು ಸರಿಯಲ್ಲ ಎಂದರು.
ಆರೋಗ್ಯ ಸಚಿವ ಸ್ಪಷ್ಟನೆ:
ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ತಪಾಸಣೆಯಲ್ಲಿ ಯಾವುದೇ ಲೋಪ ಆಗಿಲ್ಲ. ಸರ್ಕಾರ ವ್ಯವಸ್ಥಿತವಾಗಿಯೇ ತಪಾಸಣೆ ನಡೆಸಿದೆ. ಎಫ್ಎಸ್ಎಲ್ ವರದಿಗೆ ಕಳುಹಿಸಿ ಕೊಡುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆ ನಡೆಸಲಾಗಿದೆ ಅಷ್ಟೇ ಎಂದರು.
ಇದೊಂದು ಗಂಭೀರ ಸಮಸ್ಯೆಯಾಗಿದೆ. ಈ ವಿಚಾರವನ್ನು ಅರ್ಧ ಗಂಟೆ ಚರ್ಚೆಗೆ ನೀಡಬೇಕು ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಅದಕ್ಕೆ ಪ್ರತ್ಯೇಕ ಪತ್ರವನ್ನು ನೀಡಿ ಅವಕಾಶ ಮಾಡಿಕೊಡಲಾಗುವುದು ಎಂದು ಹೊರಟ್ಟಿ ಭರವಸೆ ನೀಡಿದರು