Breaking News

ಮುಂದಿನ ವರ್ಷದಿಂದ ಅಂಗನವಾಡಿಯಲ್ಲಿ`ಎಲ್ ಕೆಜಿ, ಯುಕೆಜಿ’ ಆರಂಭ : ಸಚಿವ ಬಿ.ಸಿ. ನಾಗೇಶ್

Spread the love

ಬೆಳಗಾವಿ : ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

 

ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.26 ಪೊಸಿಶನ್ ಪೇಪರ್ ಸಲ್ಲಿಕೆಯಾಗುತ್ತಿದೆ. ತಜ್ಞರ ತಂಡ ರಚಿಸಿದ್ದು, 3-4 ಸಭೆಗಳು ನಡೆದಿವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ