Breaking News

ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚನೆ

Spread the love

ಬೆಳಗಾವಿಯ ಸುವರ್ಣ ಸೌಧದ ವಿಧಾನ ಮಂಡಲದ ಕಲಾಪದಲ್ಲಿ ನಿನ್ನೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತಿಗೆ ಪ್ರತಿಕ್ರಿಯಿಸಿದ್ದಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ( Ex Speaker K R Ramesh Kumar ) ಅವರು, ರೇಪ್ ತಡೆಯದಿದ್ದರೇ ಮಲಗಿ ಎಂಜಾಯ್ ಮಾಡಬೇಕು ಎಂಬುದಾಗಿ ಹೇಳಿದ್ದರು.

ಈ ಪದ ಬಳಕೆಗೆ ಅನೇಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು. ಅಲ್ಲದೇ ಮಹಿಳೆಯರು ಕೂಡ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದ್ದರು. ಈ ಎಲ್ಲಾ ಬಳಿಕ, ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ‘ಅತ್ಯಾಚಾರ!’ ಬಗ್ಗೆ ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಉದಾಸೀನ ಮತ್ತು ನಿರ್ಲಕ್ಷ್ಯದ ಕಾಮೆಂಟ್ ಗಾಗಿ ನಾನು ಎಲ್ಲರ ಕ್ಷಮೆ ಯಾಚಿಸುತ್ತೇನೆ. ನನ್ನ ಉದ್ದೇಶ ಘೋರ ಅಪರಾಧವನ್ನು ಎತ್ತಿ ಹಿಡಿಯುವುದಾಗಿರಲಿಲ್ಲ. ಬದಲಾಗಿ ಅದನ್ನು ಖಂಡಿಸುವುದಾಗಿತ್ತು. ಆದ್ರೇ.. ಆ ಪದ ಬಳಕೆ ಮಾಡಿದ್ದು ತಪ್ಪು. ಇನ್ಮುಂದೆ ನಾನು ಅಂತಹ ಪದ ಬಳಸಲ್ಲ. ಈಗ ಬಳಸಿದ್ದಕ್ಕೆ ಎಲ್ಲರ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ