ಬೆಳಗಾವಿ: ಗಣೇಶ ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರವಾಗಿ ಎಂಎಲ್ ಸಿ ವಿವೇಕರಾವ್ ಪಾಟೀಲ್, ಹಾಗೂ ಹಾಲುಮತದ ಹಲವು ನಾಯಕರು ಇಂದು ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಕರಣ ಇತ್ಯರ್ಥ ಪಡೆಸಿ ಜಿಲ್ಲಾಡಳಿತ ವತಿಯಿಂದಲೇ ಮೂರ್ತಿ ಸ್ಥಾಪನೆ ಮಾಡುವಂತೆ ಒತ್ತಡ ಹೇರಿದರು.
ಸರ್ಕಾರ ಹಾಗೂ ನಮ್ಮ ಮೇಲೆ ಭರವಸೆ ಇಡಿ. ಗಣೇಶ ಚತುರ್ಥಿ ಹಬ್ಬ ಮುಗಿದ ಬಳಿಕ ವಿವಾದ ಬಗೆಹರಿಸಲಾಗುವುದು. ಪೀರಣವಾಡಿಯಲ್ಲಿ ಪ್ರಮುಖರ ಸಭೆ ಕರೆದು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು. ಅಲ್ಲಿಯವರೆಗೂ ಸಹಕಾರ ನೀಡುವಂತೆ ಮನವಿ ಮಾಡಿದರು.