Breaking News

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ‘ಗುಡ್ ನ್ಯೂಸ್’ : ‘ಮೊಟ್ಟೆ’ ತಿನ್ನದ ಮಕ್ಕಳಿಗೆ ಸಿಗುತ್ತೆ ಹಾಲು ..!

Spread the love

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.

 

ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ.

ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

 

ಮೊಟ್ಟೆ ವಿತರಣೆ ನಿಲ್ಲಿಸುವುದಿಲ್ಲ, ಆರೋಗ್ಯ ತಜ್ಞರು ಸಲಹೆ ಮೇರೆಗೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಮೊಟ್ಟೆ ಸೇವಿಸಿದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಶೇಂಗಾಚಿಕ್ಕಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮೊಟ್ಟೆ ತಿನ್ನಲು ನಿರಾಕರಿಸಿದ ಮಕ್ಕಳಿಗೆ ಬಾಳೆಹಣ್ಣಿನ ಜೊತೆ ಶೇಂಗಾಚಿಕ್ಕಿ ನೀಡಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದರು. .ಇದೀಗ ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ಕೊಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನ ರಾಜ್ಯ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಮೊಟ್ಟೆ ಪೂರ್ಣವಾಗಿ ಮಾಂಸಹಾರವಾಗಿದ್ದು, ಶಾಲಾ ಮಟ್ಟದಿಂದ್ಲೆ ಮಕ್ಕಳಿಗೆ ಈ ಪದ್ಧತಿ ಕಲಿಸಬಾರದು. ಮಕ್ಕಳಿಗೆ ಮೊಟ್ಟೆ ಬದಲಾಗಿ ದ್ವಿಗಳ ಧಾನ್ಯಗಳನ್ನ ನೀಡಬೇಕು. ಇನ್ನು ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ವಿವಿಧ ಮಠದ ಸ್ವಾಮೀಜಿಗಳು ಆಗ್ರಹಿಸಿದ್ದರು.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ