ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕನ್ನಡಿಗರ ವಿರುದ್ಧವೇ ಆರೋಪ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಉದ್ಧವ್ ಠಾಕ್ರೆ, ಕರ್ನಾಟಕದ ಮರಾಠಿ ಜನರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವ ಮೂಲಕ ಹಿಂದೂ, ವಿಕೃತ ಮನೋಭಾವವನ್ನು ಪ್ರಧಾನಿಯೇ ಪರಿಶೀಲಿಸಬೇಕು ಮತ್ತು ಸಂಬಂಧಪಟ್ಟವರ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅಲ್ಲಿನ ರಾಜ್ಯ ಸರ್ಕಾರವನ್ನು ಕೇಳಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದ ಪ್ರಕರಣ ಅತ್ಯಂತ ಖಂಡನೀಯ. ಛತ್ರಪತಿ ಶಿವಾಜಿ ಮಹಾರಾಜರು ದೇಶದ ಎಲ್ಲರ ದೈವ, ಪ್ರತಿಮೆ ಮೇಲಿನ ದಾಳಿ ಖಂಡನೀಯ ಎಂದು ಹೇಳಿದ್ದಾರೆ.