ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಆನಗೋಳ ಚಲೋ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ನಿಷೇಧಾಜ್ಞೆ ನಡುವೆಯೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.