ಬೆಳಗಾವಿ : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಸಿಹಿಸುದ್ದಿ ನೀಡಿದ್ದು, ಪಿಡಿಒಗಳಿಗೆ ಕೇಂದ್ರ ಸ್ಥಾನದಲ್ಲೇ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ತಳವಾರ ಸಾಬಣ್ಱ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಪಿಡಿಒಗಳ ವಸತಿಗೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗುವುದು. ಇಲಾಖೆಯಿಂದ ಹಣ ಹೊಂದಿಸಲು ಆಗದಿದ್ದರೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಕೋರಲಾಗುವುದು ಎಂದು ಭರವಸೆ ನೀಡಿದ್ದಾರೆ