Breaking News

ಶಿವಾಜಿಗೆ ಮಸಿ, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದು ಕಾಂಗ್ರೆಸ್‌ನವರು: ಬಿಜೆಪಿ

Spread the love

ಬೆಂಗಳೂರು: ‘ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು.

ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ’ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಇಂದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬೆಳಗಾವಿ ವಿವಾದ ಹಾಗೂ ಶಿವಾಜಿ, ರಾಯಣ್ಣ ಪ್ರತಿಮೆಗೆ ಮಸಿ ಬಳಿದಿರುವುದು ಕಾಂಗ್ರೆಸ್ ಕಾರ್ಯಕರ್ತರು ಎಂದು ನೇರ ಆರೋಪ ಮಾಡಿದೆ.’ಡಿ.ಕೆ ಶಿವಕುಮಾರ್ ಅವರೇ ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಬಿಜೆಪಿ ಪ್ರಶ್ನಿಸಿದೆ.

ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಸಿದ್ದರಾಮಯ್ಯ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ’ ಎಂದು ಬಿಜೆಪಿ ಹೇಳಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ