Breaking News

ಬೆಳಗಾವಿ ನಗರ ಹಾಗೂ ಬೆಳಗಾವಿ, ತಾಲೂಕಾ ವ್ಯಾಪ್ತಿಯಲ್ಲಿ ಕಲಂ 144ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿ

Spread the love

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಜಾರಿಯಾಲ್ಲಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ಅವಮಾನಪಡಿಸಿದ ಘಟನೆಗೆ ಪ್ರತಿರೋಧವಾಗಿ ಕೆಲವು ಸಂಘಟಣಿಗಳು ಡಿಸೆಂಬರ್ 17ರ ರಾತ್ರಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಹಲವೆಡೆ ಕಡೆ ಕಲ್ಲು ತೂರಾಟ ಹಾಗೂ ಅನಗೋಳದಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣಗಳು ನಡೆದಿದ್ದವು. ಎಂಇಎಸ್ ಪುಂಡಾಟ, ಕರವೇ ಪ್ರತಿಭಟನೆ ಬೆನ್ನಲ್ಲೇ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಬೆಳಗಾವಿ ನಗರ ಹಾಗೂ ಬೆಳಗಾವಿ, ತಾಲೂಕಾ ವ್ಯಾಪ್ತಿಯಲ್ಲಿ ಕಲಂ 144 ಸಿಆರ್‌ಪಿಸಿ ರಂತೆ ಡಿಸೆಂಬರ್ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ನಿಷೇಧಾಜ್ಞೆ ಕ್ರಮವನ್ನು ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಗೋವಾದಲ್ಲಿ ಎಮ್ಮೆಗೆ ಡಿಕ್ಕಿಯಾದ ಕಾರವಾರದ ವೈದ್ಯ ವಿದ್ಯಾರ್ಥಿಗಳ ಬೈಕ್: ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

Spread the love ಕಾರವಾರ: ಗೋವಾಗೆ ತೆರಳಿ ಅಲ್ಲಿಂದ ವಾಪಸಾಗುತ್ತಿದ್ದ ಕಾರವಾರದ ಕ್ರಿಮ್ಸ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಎಮ್ಮೆಯೊಂದು ಅಡ್ಡಬಂದ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ