Breaking News

ಕಿಡಿಗೇಡಿಗಳಿಗೆ ಪೊಲೀಸರ ಭಯವಿಲ್ಲ:ಸಿದ್ದರಾಮಯ್ಯ

Spread the love

ಬೆಳಗಾವಿ: ಕೆಲ ಪುಂಡರು ರಾಯಣ್ಣ ಪ್ರತಿಮೆ ವಿರೂಪಗೊಳಿಸುವ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ದುರುದ್ದೇಶದಿಂದಲೇ ಇಂತ ಕೃತ್ಯವೆಸಗಲಾಗಿದೆ. ಇಂತಹ ಘಟನೆ ಖಂಡನಿಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಳಗಾವಿಯ ಆನಗೋಳದಲ್ಲಿ ಮರುಸ್ಥಾಪನೆಯಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಿದ್ದರಾಮಯ್ಯ, ರಾಯಣ್ಣ ಯಾವುದೆ ಒಂದು ಜಾತಿಗೆ ಸೀಮಿತರಾದವರಲ್ಲ, ಬ್ರೀಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನಾನಿ, ಮಹಾನ್ ದೇಶಭಕ್ತ. ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಕಿಡಿಗೇಡಿಗಳಿಗೆ ಪೊಲೀಸರ ಭಯವಿಲ್ಲ. ಇಂತಹ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದರ್ಥ. ಬಿಜೆಪಿ ಸರ್ಕಾರದಲ್ಲಿ ಇಂಟಲಿಜನ್ಸ್ ಸತ್ತುಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಂಇಎಸ್ ಪುಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದ ಮೂಲ ಉದ್ದೇಶ. ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ಅವಕಾಶವಿದೆ. ಎಂಇಎಸ್ ನಿಷೇಧದ ಬಗ್ಗೆ ಒತ್ತಾಯಗಳು ಕೇಳಿಬಂದಿದೆ. ಈ ಬಗ್ಗೆ ಸದನದಲ್ಲಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ₹4.85 ಕೋಟಿ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ

Spread the loveಬೆಂಗಳೂರು: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಪಡೆದುಕೊಳ್ಳಲು ಹೋರಾಡಿ ಜೈಲು ಶಿಕ್ಷೆ ಅನುಭವಿಸಿದ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ