Breaking News

ಎಂಇಎಸ್ ನಿಂದ ಶಾಂತಿ ಸುವ್ಯವಸ್ಥೆ ಹಾಳಾಗುತ್ತಿದೆ. ಇಂತಹ ಸಂಘಟನೆಯನ್ನು ಮೊದಲು ನಿಷೇಧಿಸಬೇಕು: ಸಿದ್ದರಾಮಯ್ಯ

Spread the love

ಬೆಳಗಾವಿ: ಎಂಇಎಸ್ ನಿಂದ ಶಾಂತಿ ಸುವ್ಯವಸ್ಥೆ ಹಾಳಾಗುತ್ತಿದೆ. ಇಂತಹ ಸಂಘಟನೆಯನ್ನು ಮೊದಲು ನಿಷೇಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅವರಿಗೆ ಮಾನ, ಮರ್ಯಾದೆ ಏನೂ ಇಲ್ಲ. ಅಂತವರಿಂದ ನೆಮ್ಮದಿ ಹಾಳಾಗುತ್ತದೆ. ನಾವು ಹೋಗಿ ಮಹಾರಾಷ್ಟ್ರದಲ್ಲಿ ಗಲಾಟೆ ಮಾಡುತ್ತೇವಾ? ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ವಿಧಾನಸಭೆಯಲ್ಲಿ ಎಂಇಎಸ್ ಪುಂಡಾಟ ಪ್ರಕರಣದ ಬಗ್ಗೆ ವಿಷಯ ಪ್ರಸ್ತಾಪವಾಗಿದ್ದು, ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಂಇಎಸ್ ಪುಂಡರು ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದಾರೆ. ಪ್ರತಿಮೆ ಇದ್ದ ಸ್ಥಳಕ್ಕೆ ನಾನು ಭೇಟಿ ನೀಡಿದ್ದೇನೆ. ಉದ್ದೇಶ ಪೂರ್ವಕವಾಗಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಕಾನೂನಿನಲ್ಲಿ ಅವಕಾಶವಿದ್ದರೆ ಎಂಇಎಸ್ ನಿಷೇಧ ಮಾಡಿ ಆದೇಶ ಹೊರಡಿಸಬೇಕು. ಪುಂಡಾಟಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಇನ್ಮುಂದೆ ಇಂಥಹ ಘಟನೆ ಮರುಕಳಿಸದಂತೆ ಎಚ್ಚರಿಕೆ ಸಂದೇಶ ರವಾನಿಸಬೇಕು ಎಂದು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ ಮೊದಲಾದವರು ಸಹ ಎಂಇಎಸ್ ವರ್ತನೆಯನ್ನು ಕಟುವಾಗಿ ಖಂಡಿಸಿದರು.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ