Breaking News

ಸಿಎಂ ಬೊಮ್ಮಾಯಿ 1 ತಿಂಗಳಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿದ್ದಾರೆ.. ನಮ್ಮ ಶಾಪ ತಟ್ಟದೇ ಇರಲ್ಲ.. ಬಸವಪ್ರಕಾಶ ಸ್ವಾಮೀಜಿ

Spread the love

: ಬೆಳಗಾವಿ : ಮುಂಬರುವ ಒಂದು ತಿಂಗಳ ಅವಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಕೂಡಲ ಸಂಗಮ ಬಸವ ಧರ್ಮ ಪೀಠದ ಬಸವಪ್ರಕಾಶ ಸ್ವಾಮೀಜಿ ಶಾಪ ಹಾಕಿದರು.
 ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಪೊಲೀಸರನ್ನು ಚೂ‌ ಬಿಟ್ಟು ಕಾವಿ ಕುಲಕ್ಕೆ ಅವಮಾನ ಮಾಡಿದೆ. ಈ‌ ಅನ್ಯಾಯವನ್ನು ಲಿಂಗಾಯತ ಸಮುದಾಯ ಸಹಿಸಿಕೊಳ್ಳುವುದಿಲ್ಲ.

ಸ್ವಾಮೀಜಿಗಳನ್ನು, ಲಿಂಗನಿಷ್ಠ ಪರವಾಗಿರುವ ಕಾರ್ಯಕರ್ತರನ್ನು ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ನಾವೆಲ್ಲರೂ ಎಲ್ಲವನ್ನು ಬಿಟ್ಟ ಬಂದ್ಮೇಲೆ ಪೊಲೀಸರು ಅಕ್ಕ-ತಂಗಿಯರನ್ನು ಹಚ್ಚಿ ಬೈಯುವುದು ಅಷ್ಟೊಂದು ಸಮಂಜಸವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಸುವರ್ಣಸೌಧಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದರು. ಹಿಗ್ಗಾಮುಗ್ಗಾ ಬೈದಿದ್ದಾರೆ. ನಮಗೆ ನ್ಯಾಯ ಸಿಗಬೇಕು. ನಮ್ಮಂತ ಸ್ವಾಮೀಜಿಗಳಿಗೆ ಈ ರೀತಿ ಆದ್ರೆ ನಮ್ಮ ಶಾಪ ಅವರಿಗೆ ತಟ್ಟದೆ ಬಿಡೋದಿಲ್ಲ. ನಮ್ಮ ಶಾಪ ತಟ್ಟಿಯೇ ತಟ್ಟುತ್ತದೆ. ಖಂಡಿತಾ ಅವರು ಒಂದು ತಿಂಗಳಲ್ಲಿ ಅಧಿಕಾರದಿಂದ ಕೆಳಗೆ ಇಳಿಯಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ