Breaking News

MES ಪುಂಡಾಟದ ಹಿಂದಿನ ಡೈರೆಕ್ಟರ್​ & ಪ್ರೊಡ್ಯೂಸರ್​ DK ಶಿವಕುಮಾರ್; CT ರವಿ ವಾಗ್ದಾಳಿ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ ಪುಂಡಾಟಕ್ಕೆ ಡಿ.ಕೆ ಶಿವಕುಮಾರ್​ ಅವ್ರೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​ನವ್ರು ಹತಾಶೆಯ ಭಾವದಲ್ಲಿದ್ದಾರೆ. ಹೀಗಾಗಿ ದೇಶದಲ್ಲಿ ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ. ಜೊತೆಗೆ ಇದೆಲ್ಲದರ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಇದ್ದು, ಅವರೇ ಈ ಪುಂಡಾಟದ ಹಿಂದಿನ ಅಸಲಿ ನಿರ್ದೇಶಕ ಮತ್ತು ನಿರ್ಮಾಪಕ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದು, ಡಿಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್​ ಅವ್ರ ಖಟ್ಟರ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು. ಇದ್ರ ಉದ್ದೇಶ ಜಾತಿ ಸಂಘರ್ಷ, ಭಾಷಾ ಸಂಘರ್ಷ ಹುಟ್ಟು ಹಾಕಬೇಕು, ರಾಜಕೀಯ ದುರ್ಲಾಭ ಪಡೆದುಕೊಳ್ಳಬೇಕು. ಇವರ ಈ ಸಂಚನ್ನು ಬಯಲಿಗೆಳೆಯಬೇಕು ಎಂದು ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡುತ್ತೇನೆ ಎಂದು ಸಿಟಿ ರವಿ ಹೇಳಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ