Breaking News

ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ

Spread the love

ಹೈದರಬಾದ್: ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶನಿವಾರ ಹೈದರಾಬಾದ್‍ನ ಹೊರವಲಯದಲ್ಲಿರುವ ರೆಸಾರ್ಟ್‍ನಲ್ಲಿ ಸಲಿಂಗಕಾಮಿ ಜೋಡಿಯ ವಿವಾಹ ಮಹೋತ್ಸವ ಅದ್ದೂರಿಯಾಗಿ ನೆರವೇರಿತ್ತು. ಹೋಟೆಲ್ ಮ್ಯಾನೇಜ್‍ಮೆಂಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಹಿರಿಯ ಅಧ್ಯಾಪಕರಾದ ಕೋಲ್ಕತ್ತಾ ಮೂಲದ ಸುಪ್ರಿಯೊ ಚಕ್ರವರ್ತಿ(31) ಮತ್ತು ಎಂಎನ್‍ಸಿ ಉದ್ಯೋಗಿಯಾಗಿರುವ ದೆಹಲಿ ಮೂಲಕ ಅಭಯ್ ಡ್ಯಾಂಗ್ (34) ಬಿಳಿ ಸೂಟಿನಲ್ಲಿ ಉಂಗುರ ವಿನಿಮಯ ಮಾಡಿಕೊಳ್ಳುವ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ನಂತರ ಬೆಂಗಾಲಿ ಮತ್ತು ಪಂಜಾಬಿ ಸಂಪ್ರದಾಯದಂತೆ ವಿವಾಹ ಮಾಡಿಕೊಂಡಿದ್ದಾರೆ.8 ವರ್ಷಗಳಿಂದ ರಿಲೇಶನ್ ಶಿಪ್‍ನಲ್ಲಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಪತಿ ಮತ್ತು ಪತಿ ಆಗಿದ್ದು, ಈ ವಿಶೇಷ ಮದುವೆಗೆ ಅವರು ಪ್ರಾಮಿಸಿಂಗ್ ಸೆರ್ಮನಿ ಎಂಬ ಹೆಸರನ್ನು ಕೊಟ್ಟಿದ್ದಾರೆ. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ನಡೆದ ಈ ವಿವಾಹ ಮಹೋತ್ಸವದಲ್ಲಿ ದಂಪತಿಗಳ ಅನೇಕ ಸ್ನೇಹಿತರು ಮತ್ತು ಆಪ್ತರು ಭಾಗವಹಿಸಿದ್ದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ