Breaking News

ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ

Spread the love

ಬೆಳಗಾವಿ: ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು.

ಇದೇ ವೇಳೆ ಅವರು ಮಾತನಾಡಿ, ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ ಅವರ ಹಿಂದೆ ಯಾರ್ ಇದ್ದಾರೆ ಎನ್ನುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಹೇಳಿದರು.

 

ಮಹಾರಾಷ್ಟ್ರದ ಜತ್ ತಾಲೂಕು, ಬಹಳ ಬರಗಾಲಪೀಡಿತ ತಾಲೂಕಾಗಿದೆ. ಕನ್ನಡಿಗರು ಇರುವಂತ ತಾಲೂಕಾಗಿದೆ. ಈ ತಾಲೂಕಿನ 40 ಗ್ರಾಮ ಪಂಚಾಯ್ತಿಗಳು ಕರ್ನಾಟಕಕ್ಕೆ ಸೇರಿಸುವಂತೆ ರೆಸಲ್ಯೂಷನ್ ಮಾಡಿವೆ. ಇದ್ಯಾವುದನ್ನು ಲೆಕ್ಕಿಸದೇ ಕೆಲ ಪುಂಡರು, ಬೆಂಬಲಿತರು ಒಂದಿಲ್ಲ ಒಂದು ರೀತಿಯಲ್ಲಿ ಬೆಳಗಾವಿಯನ್ನು ಟಾರ್ಗೆಟ್ ಮಾಡಿಕೊಂಡು ಕ್ಷೋಭೆ ಉಂಟು ಮಾಡುವಂತ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಈ ಪುಂಡರಿಗೆ, ಬೆಳಗಾವಿಯನ್ನು ಕ್ಷೋಭೆ ತರುತ್ತಿರೋ ಬಗ್ಗೆ ಇತಿಶ್ರೀ ಹಾಡಬೇಕು ಅಂದ್ರೇ, ಎಲ್ಲರೂ ಕೂಡಿ ಕಠಿಣ ನಿಲುವನ್ನು ತೆಗೆದುಕೊಳ್ಳಬೇಕಿದೆ. ಬೆಳಗಾವಿಯ ವಿಧಾನಸಭೆಯ ಸುವರ್ಣ ಸೌಧ ನಿರ್ಮಾಣವಾಗಿರುವಂತೆದ್ದು ಶಕ್ತಿ ಸೌಧವಾಗಿದೆ. ಇಲ್ಲಿ ಯಾವುದೇ ರೀತಿಯ ಕಾಂಪ್ರಮೈಸ್ ಆಗುವುದಾಗೀ, ಮಾತುಕತೆಗೆ ಮುಂದಾಗೋದಾಗಲೀ ಇಲ್ಲವೇ ಇಲ್ಲ. ಗಡಿ ವಿಚಾರದಲ್ಲಿ ಒಂದು ಇಂಚು ಬಿಟ್ಟುಕೊಡೋದಿಲ್ಲ. ಮಹಾರಾಷ್ಟ್ರದಲ್ಲಿರುವಂತ ಕನ್ನಡಿಗರ ರಕ್ಷಣ ನಮ್ಮ ಹೊಣೆಯಾಗಿದೆ ಎಂದರು.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ