Breaking News

ಅಕ್ರಮ-ಸಕ್ರಮ : ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

Spread the love

ಬೆಳಗಾವಿ : ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಆಗಿರುವ ಸಮಸ್ಯೆ ಬಗೆಹರಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.

ಈಶ್ವರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ 2 ಸಭೆ ನಡೆಸಿದ್ದು, ಮುಂದಿನ ಸಭೆಯಲ್ಲಿ ಚರ್ಚಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕುರಿತಂತೆ ಶಿಫಾರಸು ಮಾಡಿ ಸಂಪುಟಕ್ಕೆ ಸಲ್ಲಿಸಿ ಬಗೆಹರಿಸಲು ಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಅಕ್ರಮ-ಸಕ್ರಮ ಯೋಜನೆ ಜಾರಿ ಆಗದ ಕಾರಣ ನಗರಸಭೆಗಳಿಗೆ ಬರುತ್ತಿದ್ದ ತೆರಿಗೆಯಲ್ಲಿ ಶೇ. 30 ರಷ್ಟು ಕಡಿಮೆಯಾಗಿದೆ. ನಗರಸಭೆಗಳು ನಡೆಸಲು ಕಷ್ಟಕರವಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ