Breaking News

ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಗೆ ಪತ್ರ

Spread the love

ಬೆಂಗಳೂರು: ಮಲಪ್ರಭಾ ನದಿ ಪಾತ್ರದಲ್ಲಿ ವ್ಯಾಪಕ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕದ ಮಲಪ್ರಭಾ ನದಿ ತೀರದಲ್ಲಿ ಮಾನವರ ದುರಾಸೆಯಿಂದ ಹೆಚ್ಚು ಒತ್ತುವರಿಯಾಗಿದೆ. ಇದರ ಪರಿಣಾಮ ಮಲಪ್ರಭಾ ನದಿಯಲ್ಲಿ ಭಾರೀ ಪ್ರವಾಹ ಉಂಟಾಗುತ್ತಿದೆ. ಇದರಿಂದಾಗಿ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗುತ್ತಿದೆ. ಹೀಗಾಗಿ ಮಲಪ್ರಭಾ ನದಿ ಪಾತ್ರದಲ್ಲಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಮಲಪ್ರಭಾ ನದಿಯ ಉಳಿವಿಗೆ ಒತ್ತುವರಿ ತೆರವುಗೊಳಿಸುವುದು ಅನಿವಾರ್ಯವಾಗಿದೆ ಎಂದು ಗೋವಿಂದ್ ಕಾರಜೋಳ ಪತ್ರದಲ್ಲಿ ತಿಳಿಸಿದ್ದಾರೆಪ್ರತಿ ವರ್ಷ ಉಂಟಾಗುವ ಭಾರೀ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಮತ್ತು ಪ್ರವಾಹ ನಿಯಂತ್ರಿಸುವ ಬಗ್ಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಿಗದಿಪಡಿಸಬೇಕು. ತುರ್ತು ಪರಿಹಾರ ಕಂಡುಕೊಳ್ಳುವ ಬಗ್ಗೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕಾರಜೋಳ ವಿನಂತಿಸಲಾಗಿದೆ.


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ