Breaking News

ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

Spread the love

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಹಾಗೂ ಉಪಚುನಾವಣೆಗಳ ಹಿನ್ನಲೆಯಲ್ಲಿ ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ.

ಆದ್ದರಿಂದ ಡಿ.25 ರ ಮದ್ಯರಾತ್ರಿ 11.59 ರಿಂದ ಡಿ. 27 ರ ಮದ್ಯರಾತ್ರಿ 11.59 ರವರೆಗೆ ಮತದಾನ ಜರುಗಲಿರುವ ಒಟ್ಟು 15 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮದ್ಯದ ಅಂಗಡಿ, ಬಾರ್ ಗಳನ್ನು ಬಂದ್ ಮಾಡಲು ಮತ್ತು ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಾಣೆ, ಸಂಗ್ರಹಣೆಯನ್ನು ನಿಷೇಧಿಸಿ ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 (ಸಿ) ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಆದೇಶ ಹೊರಡಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಉಪ ಅಧೀಕ್ಷಕರು ಹಾಗೂ ವಿಚಕ್ಷಕದಳದ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಾತ್ರೆ, ಸಂತೆ ನಿಷೇಧ

ಧಾರವಾಡ: ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಮತದಾನ ದಿನದಂದು ಮತದಾನ ಜರುಗುವ ಪ್ರದೇಶ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಡಿ.27 ರಂದು ಒಟ್ಟು 15 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜರುಗಲಿರುವ ಸಂತೆ, ಜಾತ್ರೆ ಮತ್ತು ಉತ್ಸವಗಳನ್ನು ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ