Breaking News

100 ಹಾಸ್ಟೆಲ್‍ಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಕೆ

Spread the love

ಬೆಳಗಾವಿ, ಡಿ.23- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಹೊಸದಾಗಿ 100 ಹಾಸ್ಟೇಲ್‍ಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುತ್ತಿರುವುದಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದರು.

 

ವಿಧಾನ ಪರಿಷತ್ ನ ಶೂನ್ಯ ವೇಳೆಯಲ್ಲಿ ಸದಸ್ಯ ಚಿದಾನಂದಗೌಡ ಅವರು ಕೇಳಿದ ಪ್ರಶ್ನೆಗೆ, ಉತ್ತರಿಸಿದ ಸಚಿವರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶ ನೀಡಲಾಗುತ್ತಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅಗತ್ಯದಷ್ಟು ಹಾಸ್ಟೇಲ್ನ ಸ್ಥಳಾವಕಾಶದ ಕೊರತೆ ಇದೆ ಎಂದರು.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ರಾಜ್ಯದಲ್ಲಿ ಹೊಸದಾಗಿ 100 ಹಾಸ್ಟೇಲ್ ಗಳ ನಿರ್ಮಾಣಕ್ಕೆ ಅನುಮತಿ ನೀಡಲು ವಾರದೊಳಗೆ ಆರ್ಥಿಕ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹೊಸ ಹಾಸ್ಟೇಲ್ಗಳಿಂದ ರಾಜ್ಯದ 12 ಸಾವಿರ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ