ಚೆನ್ನೈ: ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಎಸ್ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬದುನ್ನು ತಿಳಿಸಿದರು ಎಂದು ಮಾಹಿತಿ ನೀಡಿದರು. ಎಸ್ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ ಪ್ರಾರ್ಥನೆಗಳು ನಡೆದಿತ್ತು. ಈಗ ಗುಣಮುಖರಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.
ಕಳೆದ ಆಗಸ್ಟ್ 5ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿಪಿಗೆ ಚಿಕಿತ್ಸೆ ನೀಡಿದ್ದವು