Breaking News
Home / ರಾಷ್ಟ್ರೀಯ / ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ

ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ

Spread the love

ಚೆನ್ನೈ: ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ.
ಈ ಸಂಬಂಧ  ಮಾತನಾಡಿದ ಅವರು, ಎಸ್ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬದುನ್ನು ತಿಳಿಸಿದರು ಎಂದು ಮಾಹಿತಿ ನೀಡಿದರು. ಎಸ್ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ ಪ್ರಾರ್ಥನೆಗಳು ನಡೆದಿತ್ತು. ಈಗ ಗುಣಮುಖರಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.
ಕಳೆದ ಆಗಸ್ಟ್ 5ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿಪಿಗೆ ಚಿಕಿತ್ಸೆ ನೀಡಿದ್ದವು

Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

Spread the loveಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ