ಬೆಳಗಾವಿ): ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಆದರೆ ಸರ್ಕಾರ ಇದರ ಉದ್ದೇಶ ಮೆರತ್ತಿದೆ. ಉತ್ತರ ಕರ್ನಾಟಕದಲ್ಲಿ ಜ್ವಲಂತ ಸಮಸ್ಯೆಗಳಿದ್ದು, ಬೆಳೆ ಪರಿಹಾರ, ಪ್ರವಾಹ, ಕರೋನಾ ಸಮಸ್ಯೆಯಿದೆ. ಹಾದಿ ಬೀದಿಯಲ್ಲಿ ಜನ ಸಾಯುತ್ತಿದ್ದಾರೆ.
ಇದರ ಬಗ್ಗೆ ಚರ್ಚೆ ಆಗಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕವನ್ನು ಕಡೆಗಣಿಸಲಾಗುತ್ತಿದೆ. ಇದರ ವಿರುದ್ದ ಹೋರಾಟ ಮಾಡಲು ಬೀದಿಗಿಳಿಯುತ್ತೇವೆ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಜ್ಯಕ್ಕೆ ಕೂಗು ಹೆಚ್ಚಾಗುತ್ತದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ. ಪ್ರತ್ಯೇಕ ರಾಜ್ಯಕ್ಕೆ ನಮ್ಮ ಬೆಂಬಲವಿಲ್ಲ, ಆದರೆ ಅಂತದ್ದೇನಾದರೂ ಅದಕ್ಕೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.