ಬೆಂಗಳೂರು : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ವಿಧೇಯಕದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ (Minister Araga Gyanendra) ಮಾಹಿತಿ ನೀಡಿದ್ದಾರೆ.
ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು.
ಬಲವಂತದ ಮತಾಂತರ ಮಾಡಿದರೆ ಶಿಕ್ಷೆ ಜೊತೆಗೆ ದಂಡ, ಬಲವಂತದ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ. ಸಾಮೂಹಿಕವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಮತಾಂತರವಾದ ವ್ಯಕ್ತಿ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ. ಮೂಲ ಧರ್ಮದ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾನೆ. ಈ ಬಗ್ಗೆ ಜಿಲ್ಲಾಧಿಕಾರಿಯೇ ದೃಢಪಡಿಸುತ್ತಾರೆ. ದೃಢಪಡಿಸಿದ ಬಳಿಕ ನಿರ್ದಿಷ್ಟ ಜಾತಿ ಬಗ್ಗೆ ಉಲ್ಲೇಖಿಸುತ್ತಾರೆ. ಅದಾದ ಬಳಿಕ ಆ ಜಾತಿಯಲ್ಲಿ ಅವರು ಮುಂದುವರಿಯಬಹುದು ಎಂದು ತಿಳಿಸಿದ್ದಾರೆ.