ಬೆಳಗಾವಿ, ಡಿ.24- ರಾಜ್ಯದಲ್ಲಿರು ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಯವರು ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರತಿಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ವಿಧಾನ ಪರಿಷತ್ ನಲ್ಲಿ ಸದಸ್ಯ ಎಸ್.ವಿ.ಸಂಕನೂರು, ಅವರು ಪ್ರಶ್ನೆ ಕೇಳಿ ರಾಯಚೂರು ಹೊರತು ಪಡಿಸಿ, ಶಿವಮೊಗ್ಗ, ಬೆಂಗಳೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶೇ.60ಕ್ಕಿಂತ ಹೆಚ್ಚಿನ ಬೋಧಕ ಹುದ್ದೆಗಳು ಖಾಲಿ ಇವೆ. ಬೋಧಕ ಹುದ್ದೆಗಳು ಖಾಲಿ ಇರುವುದರಿಂದ ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳ ಮೇಲೆ ಒತ್ತಡ ಇದೆ. ಆಡಳಿತಕ್ಕೆ ಕೆಟ್ಟ ಹೆಸರು ಬರುತ್ತಿದೆ. ಅಧ್ಯಾಪಕರಿಗೆ ಕಾಲ ಕಾಲಕ್ಕೆ ಬಡ್ತಿ ನೀಡಿ ಎಂದು ಒತ್ತಾಯಿಸಿದರು.
ಉತ್ತರ ನೀಡಿದ ಸಚಿವ ಬಿ.ಸಿ.ಪಾಟೀಲ್ ಅವರು, ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಒಟ್ಟು 1619ಗಳು ಮಂಜೂರಾಗಿದ್ದವು. ಅವುಗಳಲ್ಲಿ1031 ಖಾಲಿ ಇವೆ. ಧಾರವಾಡ ಕೃ ವಿಜ್ಞಾನಗಳ ವಿವಿಯಲ್ಲಿ 1074 ಮಂಜೂರಾಗಿದ್ದು, 671 ಖಾಲಿ ಇವೆ. ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯಲ್ಲಿ 1017ಗಳು ಮಂಜೂರಾಗಿದ್ದು, 341 ಖಾಲಿ ಇವೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿದಲ್ಲಿ 592 ಗಳು ಮಂಜೂರಾಗಿದ್ದು, 403 ಖಾಲಿ ಇವೆ.
ಒಟ್ಟು ಬೋಧಕ ಹುದ್ದೆಗಳಲ್ಲಿ 2033ರ ಹುದ್ದೆಗಳ ಪೈಕಿ ಬಹಳಷ್ಟು ಖಾಲಿ ಇವೆ. ಅವುಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಯವರೊಂದಿಗೂ ಚರ್ಚಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋದಕ ಹುದ್ದೆಗಳ ಪೈಕಿ ಶೇ.50ರಷ್ಟನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.
Laxmi News 24×7