Breaking News

‘ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ. ಧನ್ಯವಾದ

Spread the love

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡಾಲಿ ಎಂದೇ ಖ್ಯಾತಿಯಾಗಿರುವ ನಟ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್ ನಟರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಕೊರೊನಾ ಕಾರಣದಿಂದ ಧನಂಜಯ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಅದರಂತೆಯೇ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ನೆಚ್ಚಿನ ನಟನಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಧನಂಜಯ್‍ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಡಾಲಿ’ ಎಂದು ವಿಶ್ ಮಾಡಿದ್ದು, ಧನಂಜಯ್ ಜೊತೆ ಇರುವ ಫೋಟೋವನ್ನು ಶೇರ್ ಮಾಡಿದ್ದಾರೆ. ದರ್ಶನ್ ಪ್ರೀತಿಯ ಶುಭಾಶಯಕ್ಕೆ ಧನಂಜಯ್ ‘ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ. ಧನ್ಯವಾದಗಳು ದರ್ಶನ್’ ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ