ಕೊಪ್ಪಳ : ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್ಸಿ & ಎಸ್ಟಿ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರೋತ್ಸಾಹಧನ ಮಂಜೂರಿಸಲಾಗಿದ್ದು, ಪ್ರೋತ್ಸಾಧನ ಜಮೆಯಾಗದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿ, ಇಲಾಖೆಗೆ ಮಾಹಿತಿ ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರಾದ ನವೀನ ಸಿಂತ್ರೆ ತಿಳಿಸಿದ್ದಾರೆ.
2021-22ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 60 ರಿಂದ 74.99 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ. 7000 ಮತ್ತು ಶೇ. 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ. 15,000 ಗಳ ಪ್ರೋತ್ಸಾಹಧನವನ್ನು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮಂಜೂರಿಸಲಾಗಿದ್ದು, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಯಾಗದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ಮಂಜೂರಾಗಿರುವುದಿಲ್ಲ.
Laxmi News 24×7