ಹುಬ್ಬಳ್ಳಿ : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವಾರದಿಂದ ಕೋವಿಡ್ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಜೊತೆಗೆ ಇಂದು ಬೆಳಗ್ಗೆ 9 ಗಂಟೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರ ಮತ್ತು ಕೇರಳದ ಜೊತೆಗೆ ತಮಿಳುನಾಡು ರಾಜ್ಯದಲ್ಲೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. ಆದ್ದರಿಂದ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಏನೇನು ಕ್ರಮ ಕೈಗೊಳ್ಳಬೇಕೆಂಬ ಕುರಿತು ಇಂದು ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಸಲಹೆ ಪಡೆಯಲಾಗುವುದು ಎಂದರು.