ವಿಜಯಪುರ : ಕೋವಿಡ್ ಸಂಕಷ್ಟದ ಕಾಲದಲ್ಲಿಯೂ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರವನ್ನು ನೀಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಅವರು ವಿಜಯಪುರ ಜಿಲ್ಲೆಯಲ್ಲಿ ಲೋಕೋಪಯೋಗಿ, ಕಂದಾಯ, ವಸತಿ, ಪ್ರವಾಸೋದ್ಯಮ, ಆರೋಗ್ಯ, ನಗರಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ 11 ಇಲಾಖೆಗಳ ಸುಮಾರು 244 ಕೋಟಿ ರೂ.
ಮೊತ್ತದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದರು.
ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರವನ್ನು ನೀಡುತ್ತಿದ್ದೇವೆ ಅಂದರೆ ಅದು ನಮ್ಮ ಸರ್ಕಾರ. ಕೇಂದ್ರದ ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಒಣಭೂಮಿ ಬೇಸಾಯದ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‍ಗೆ 6,800/- ರೂ. ಪರಿಹಾರಕ್ಕೆ ಇದಕ್ಕೆ ರಾಜ್ಯ ಸರ್ಕಾರವು ಇನ್ನೂ 6,800 ರೂ. ಸೇರಿಸಿ, 13,600 ರೂ. ಪರಿಹಾರ ನೀಡುವ ತೀರ್ಮಾನ. ನೀರಾವರಿ ಜಮೀನಿನಲ್ಲಿ ಬೆಳೆಹಾನಿಗೆ ಪ್ರತಿ ಹೆಕ್ಟೇರ್‍ಗೆ 13,500 ರೂ.ಗಳನ್ನು ಹೆಚ್ಚುವರಿಯಾಗಿ 11,500 ರೂ. ನೀಡಲು ನಿರ್ಧರಿಸಿದ್ದು, ಇದರಿಂದ ರೈತರಿಗೆ ಹೆಕ್ಟೇರ್‍ಗೆ 25,000 ರೂ ದೊರೆಯಲಿದೆ. ತೋಟಗಾರಿಕಾ ಬೆಳೆಗಳಿಗೆ ಹೆಕ್ಟೇರ್‍ಗೆ 18,000 ರೂ. ಪರಿಹಾರಕ್ಕೆ 10,000 ರೂ. ಸೇರಿಸಿ, ಒಟ್ಟು 28,000 ರೂ. ಪರಿಹಾರ ನೀಡುವ ಒಂದು ಐತಿಹಾಸಿಕ ತೀರ್ಮಾನ ಮಾಡಿದ್ದೇವೆ ಎಂದರು. ಒಟ್ಟು 14 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಅನುಕೂಲವಾಗಲಿದೆ ಅಂತಹ ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರವನ್ನು ನೀಡುತ್ತಿದ್ದೇರೆ ಅದು ನಿಮ್ಮ ಸರ್ಕಾರ – ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಎಂದು ಹೇಳಿದರು.