Breaking News

ನಾನು ಹುಬ್ಬಳಿಗೆ ಹೋದರೆ ಬೊಮ್ಮಾಯಿ ಮನೆಗೆ ಹೋಗಿ ಚಹಾ ಕುಡಿಯದೇ ಮುಂದೆ ಹೋಗಲ್ಲ., ಕಾಣದ ಶಕ್ತಿಗಳು ಮುಖ್ಯಮಂತ್ರಿಗಳಿಂದ ನನ್ನ ದೂರ ಮಾಡುತ್ತಿವೆ:

Spread the love

ಈಶ್ವರಪ್ಪನವರು ಮಾತನಾಡಿದ ನಂತರ ನಾನು ಈ ಬಗ್ಗೆ ಕ್ಲ್ಯಾರಿಫೈ ಮಾಡಿದ್ದೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ. 2023ರವರೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ ಎಂದು ಶಿಗ್ಗಾಂವಿಯಲ್ಲೂ ಹೇಳಿದ್ದೇನೆ. ಒಂದಿಲ್ಲ ಒಂದು ದಿನ ಅವರಿಗೆ ಕೇಂದ್ರದಲ್ಲಿ ಉನ್ನತ ಸ್ಥಾನ ಸಿಗುತ್ತದೆ ಎಂದು ಹೇಳಿದ್ದೇನೆ. 2023ರ ಒಳಗೆ ಇಂಥ ಬೆಳವಣಿಗೆಯಾಗುತ್ತದೆ ಎಂದು ನಾನು ಹೇಳಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನ್ನ ಹಿರಿಯ ಅಣ್ಣನಂತಿದ್ದಾರೆ. 30 ವರ್ಷಗಳಿಂದಲೂ ಅವರೊಡನೆ ನನಗೆ ಆತ್ಮೀಯತೆ ಇದೆ. ಕಾರ್ಖಾನೆಗೆ ಸಂಬಂಧಿಸಿದ್ದೂ ಸೇರಿದಂತೆ ನನ್ನ ವೈಯಕ್ತಿಕ ಸಮಸ್ಯೆಗಳನ್ನೂ ಅವರೊಂದಿಗೆ ಹಂಚಿಕೊಳ್ಳುವಷ್ಟು ಆಪ್ತತೆ ಇದೆ. ಕಾಣದ ಶಕ್ತಿಗಳು ನಮ್ಮ ಸಂಬಂಧ ಹಾಳು ಮಾಡಲು ಯತ್ನಿಸುತ್ತಿವೆ. ಬಸವರಾಜ ಬೊಮ್ಮಾಯಿ ಉತ್ತಮ ರೀತಿಯಲ್ಲಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಸದ್ಯಕ್ಕೆ ಇಲ್ಲ. ಸಚಿವ ಸಂಪುಟ ಪುನಾರಚನೆಯ ಬಗ್ಗೆ ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ